ಹಿರಿಯ ನಾಗರಿಕರ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು, ಜು.೨೭, (ಕ.ವಾ):- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಅಂಗವಿಕಲ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆರು ವೈಯಕ್ತಿಕ ಹಾಗೂ ಒಂದು ಸಂಸ್ಥೆಗೆ ಪ್ರಶಸ್ತಿ ನೀಡಲಾಗುವುದು. ಅರ್ಜಿಗಳನ್ನು ಸ್ಥಳೀಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ೨೦೨೧ರ ಆಗಸ್ಟ್ ೨೦ ಕೊನೆಯ ದಿನವಾಗಿದೆ.
ಆಸಕ್ತರು ನಗರದ ಮಾವಿನ ಕೆರೆ ಪಕ್ಕದಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕಚೇರಿಯನ್ನು ಅಥವಾ ದೂರವಾಣ ಸಂಖ್ಯೆ: ೦೮೫೩೨-೨೨೮೫೬೬ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories