ಲಸಿಕೆ ಅಭಿಯಾನ ಯಶಸ್ವಿಗೊಳಿಸುವಂತೆ ಸಂಸದರ ಕರೆ

ರಾಯಚೂರು, ಜೂ.೨೬ (ಕ.ವಾ):- ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ವಿದ್ಯಾರ್ಥಿಗಳೆಲ್ಲರೂ ಕೋವಿಡ್-೧೯ ಸೋಂಕಿಗೆ ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತಿರುವ ಲಸಿಕೆಯನ್ನು ಪಡೆಯುವಂತೆ ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ಕರೆ ನೀಡಿದರು.

ಅವರು ಜೂ.೨೬ರ ಶನಿವಾರ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ನಗರಸಭೆ, ಶಿಕ್ಷಣ ಇಲಾಖೆ, ಈಶಾನ್ಯ ಕರ್ನಾಟಕ ಶಿಕ್ಷಕರ ಸಂಘಟನೆಗಳು ಮತ್ತು ಅತಿಥಿ ಶಿಕ್ಷಕರು ಅತಿಥಿ ಉಪನ್ಯಾಸಕರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಕೋವಿಡ್-೧೯ ಲಸಿಕೆಯ ಉಚಿತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು

ಕೋವಿಡ್ ಮೊದಲನೇ ಅಲೆಯಲ್ಲಿ ಜನರು ಅನುಭವಿಸಿರುವ ಕಷ್ಟಗಳನ್ನು ಎರಡನೇ ಅಲೆಯಲ್ಲಿ ಅನುಭವಿಸಬಾರದೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿತ್ವದಲ್ಲಿ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ, ಇದೇ ವರ್ಷದ ಜನವರಿಯಲ್ಲಿ ದೇಶಾದ್ಯಂತ ವ್ಯಾಕ್ಸಿನೇಷನ್ ಡ್ರೆöÊವ್ ಆರಂಭಿಸಲಾಗಿತ್ತು, ಇದೀಗ ಜು.೨೧ರಂದು ೯೦ ಲಕ್ಷದಿಂದ ಒಂದು ಕೋಟಿ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ, ಈ ಡ್ರೆöÊವ್‌ನಲ್ಲಿ ಕರ್ನಾಟಕ ಎರಡನೇ ಸ್ಥಾನ ಪಡೆದಿತ್ತು, ಸಂಭವನೀಯ ೩ನೇ ಅಲೆ ಎದುರಾದರೇ ಅದು ಮಕ್ಕಳನ್ನು ಭಾಧಿಸಲಿದೆ ಎಂಬ ತಜ್ಞರ ಎಚ್ಚರಿಕೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು, ಬೋಧಕರು, ಶಿಕ್ಷಕರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದೆ, ಮೊದಲ ಡೋಸ್ ಪಡೆದ ನಂತರ ನಿಗದಿತ ಅವಧಿಯೊಳಗೆ ಎರಡನೆ ಡೋಸ್‌ಅನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಅವರು ತಿಳಿಸಿದರು.

ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಆರೋಗ್ಯ ಸುಧಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಸಂಸದರ ನಿಧಿಯಡಿ ೧.೩೨ ಕೋಟಿ ರೂ.ಗಳ ವೆಚ್ಚದಲ್ಲಿ ೬ ಆಂಬುಲೇನ್ಸ್ಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ, ಕೋವಿಡ್ ಸೋಂಕು ತಡೆಗಟ್ಟಲು ಪ್ರತಿಯೊಬ್ಬರು ವ್ಯಾಕ್ಸಿನ್ ಪಡೆಯಬೇಕು ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ಕೋವಿಡ್ -೧೯ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ರಾಜ್ಯದ ಇತರೆಡೆ ಹೋಲಿಕೆ ಮಾಡಿದ್ದಲ್ಲೀ ರಾಯಚೂರು ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. ೦.೧ ರಷ್ಟಿದೆ, ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ ನಂತರದ ಸ್ಥಾನದಲ್ಲಿ ರಾಯಚೂರಿದ್ದು, ಕೋವಿಡ್ ಸೋಂಕನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ವಹಿಸಿದ ಪಾತ್ರ ಅತ್ಯಂತ ಗಮನಾರ್ಹವಾದದ್ದು ಎಂದರು.

ಶಿಕ್ಷಕರು, ಉಪನ್ಯಾಸಕರನ್ನು ಸಹ ಕೊರೋನಾ ವಾರಿಯರ್ಸ್ ಎಂದು ಪರಿಗಣ ಸಿ ಅವರಿಗೆ ಲಸಿಕೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು, ಅದಕ್ಕೆ ಸ್ಪಂದಿಸಿ ಲಸಿಕೆ ವಿತರಣೆ ಮಾಡಿರುವುದು ಶ್ಲಾಘನೀಯ. ಶಿಕ್ಷಣ ಸಚಿವ ಸುರೇಶ ಕುಮಾರ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪದವಿ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಲಸಿಕೆ ನೀಡಲು ಚಾಲನೆ ನೀಡಿದ್ದಾರೆ ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮುನ್ನಾ ಶಿಕ್ಷಕರು, ಸಿಬ್ಬಂದಿಗೆ ಕೋವಿಡ್ ಲಸಿಕೆ ಹಾಕಿಸಲಾಗುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆದುಕೊಂಡು ಕೋವಿಡ್ ಸೋಂಕಿನಿAದ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕೆಂದರು.

ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಪ್ರತಿಯೊಬ್ಬರು ತಪ್ಪದೇ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ವ್ಯಾಕ್ಸಿನ್ ಪಡೆಯಬೇಕು, ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.

ಶಿಕ್ಷಕರು, ಉಪನ್ಯಾಸಕರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ನಗರಸಭೆ ಅಧ್ಯಕ್ಷ ಈ. ವಿನಯ್ ಕುಮಾರ್, ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಜಲ್ದಾರ್ ಇತರರು ಇದ್ದರು.

Latest Indian news

Popular Stories