ಸಿಇಟಿ ಪರೀಕ್ಷೆ: ಜಿಲ್ಲೆಯಲ್ಲಿ ೪೩೯೨ ವಿದ್ಯಾರ್ಥಿಗಳು ಶಾಂತಿಯುತ, ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ

ರಾಯಚೂರು,ಆ.೨೪,(ಕ.ವಾ):- ಕೋವಿಡ್-೧೯ರ ಮಾರ್ಗಸೂಚಿ ಅನ್ವಯ ಆಗಸ್ಟ್ ೨೮-೨೯ ರಂದು ಎರಡು ದಿನಗಳ ಕಾಲ ಸಿ.ಇ.ಟಿ ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಸಿ.ಇ.ಟಿ ಪರೀಕ್ಷೆಗಳು ಸುಗಮವಾಗಿ, ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಆ.೨೪ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಿ.ಇ.ಟಿ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು.

ಕೋವಿಡ್ ಎರಡನೇ ಅಲೆ ಆರಂಭದಲ್ಲಿ ಎಸ್‌ಎಸ್‌ಎಲ್‌ಸಿ, ಎಫ್.ಡಿ.ಸಿ ಮತ್ತು ಪಿಯುಸಿ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಸಿದ್ದೇವೆ ಅದೇ ರೀತಿ ಸಿ.ಇ.ಟಿ ಪರೀಕ್ಷೆಗಳು ಕೂಡ ಅಚ್ಚುಕಟ್ಟಾಗಿ ಮತ್ತು ಸುಸೂತ್ರವಾಗಿ ನಡೆಯಬೇಕೆಂದು ಅವರು ಹೇಳಿದರು.

ಜಿಲ್ಲೆಯಾದ್ಯಂತ ಒಟ್ಟು ೧೩ ಪರೀಕ್ಷೆ ಕೇಂದ್ರಗಳು ಇದ್ದು, ರಾಯಚೂರು ನಗರದಲ್ಲ್ಲಿ ೭, ಸಿಂಧನೂರಿನಲ್ಲಿ ೩, ಹಾಗೂ ಲಿಂಗಸೂಗೂರಿನಲ್ಲಿ ೩ ಪರೀಕ್ಷಾ ಕೇಂದ್ರಗಳಲ್ಲಿ ೪೩೯೨ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಪರೀಕ್ಷೆ ನಡೆಯುವ ಒಂದು ದಿನ ಮುಂಚಿತವಾಗಿ ಎಲ್ಲಾ ಪರೀಕ್ಷೆ ಕೊಠಡಿಗಳಿಗೆ ಕಡ್ಡಾಯವಾಗಿ ಸ್ಯಾನಿಟೈಜರ್ ವ್ಯವಸ್ಥೆ ಮಾಡಬೇಕು. ಪರೀಕ್ಷೆ ನಡೆಯುವ ದಿನ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಒದಗಿಸಬೇಕು. ಅಲ್ಲದೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ೩.ಮೀ ಅಂತರವನ್ನು ಹೊಂದಿರಬೇಕು. ಒಂದು ಬ್ರಾಂಚ್‌ಗೆ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು. ಕೆಮ್ಮು, ನೆಗಡಿ, ಶೀತ, ಜ್ವರ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸೆಕ್ಷನ್ ೧೪೪ ಜಾರಿಗೆ ಇರುವುದರಿಂದ ಪರೀಕ್ಷೆ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳು ,ಪಾನ್ ಪರಾಕ್, ತಂಬಾಕು ಇನ್ನಿತರೇ ಮಾದಕ ವಸ್ತುಗಳನ್ನು ಮಾರುವ ಮಾಲೀಕರಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಅವರು ಹೇಳಿದರು.

ಪ್ರತಿಯೊಂದು ಕಸ್ಟಡಿಗೆ ಇಬ್ಬರು ಸ್ಕೊಡ್‌ಗಳು, ಒಬ್ಬರು ಕಸ್ಟೋಡಿಯನ್ ನೇಮಕ ಮಾಡಲಾಗಿದ್ದು, ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಪರೀಕ್ಷಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಪ್ರತಿ ಕೇಂದ್ರಕ್ಕೆ ೩ಜನ ಪುರುಷ ಪೊಲೀಸ್ ಸಿಬ್ಬಂದಿಗಳು ಹಾಗೂ ಒಬ್ಬ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಕ ಮಾಡಬೇಕು. ಅಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Latest Indian news

Popular Stories