ರಾಯಚೂರುಕಚೇರಿ ಅವಧಿಯಲ್ಲಿ ಬದಲಾವಣೆರಾಯಚೂರು

ರಾಯಚೂರು,ಏ.೧೨.(ಕ.ವಾ)- ಇದೇ ಏಪ್ರಿಲ್ ಹಾಗೂ ಮೇ ಮಾಹೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿರುವ ಹಿನ್ನಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ೨೦೨೧ರ ಏಪ್ರಿಲ್ ೧೨ ರಿಂದ ಜಾರಿಗೆ ಬರುವಂತೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಯ ಕೆಲಸದ ಸಮಯವನ್ನು ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧.೩೦ರ ವರೆಗೆ ಬದಲಾವಣೆ ಮಾಡಲಾಗಿದೆ.

ಈ ಪ್ರಯುಕ್ತ ರಾಯಚೂರು ಜಿಲ್ಲೆಯಲ್ಲಿ ಏಪ್ರಿಲ್ ೧೨ ರಿಂದ ಜಾರಿಗೆ ಬರುವಂತೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಯ ಸಮಯ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧.೩೦ರ ವರೆಗೆ ಬದಲಾವಣೆ ಮಾಡಲಾಗಿದೆ.

ಬದಲಾದ ಕಚೇರಿ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು, ಇದು ಕೋವಿಡ್ ಹಾಗೂ ಚುನಾವಣಾ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories