ವಾಲ್ಮೀಕಿ ಅಭಿವೃದ್ಧ ನಿಗಮದ ಭ್ರಷ್ಟಾಚಾರ | ‘ಸಚಿವ ಬೋಸರಾಜು, ಶಾಸಕ ದದ್ದಲ್ ವಿರುದ್ಧ ಎಫ್ ಐಆರ್ ದಾಖಲಿಸಿ’


ರಾಯಚೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಕ್ರಮ ವರ್ಗಾವಣೆ ಪ್ರಕರಣದ ಹಿಂದೆ ಸಚಿವ ಎನ್ ಎಸ್ ಬೋಸರಾಜು, ನಿಗಮದ ಅಧ್ಯಕ್ಷ ಶಾಸಕರೂ ಆಗಿರುವ ಬಸನಗೌಡ ದದ್ದಲ್ ಅವರ ಕೈವಾಡವಿದ್ದು, ಇಬ್ಬರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ಎಫ್ ಐಆರ್ ದಾಖಲಿಸಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿರುಪಾಕ್ಷಿ ಒತ್ತಾಯಿಸಿದರು.

ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆಗಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಜೀರೋ ಬ್ಯಾಲೆನ್ಸ್ ಖಾತೆ ತೆರೆದು ₹94 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಶೋಷಿತ ಸಮುದಾಯ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮದ ಬಗ್ಗೆ ಸಿಬಿಐಗೆ ದೂರು ನೀಡಲಾಗಿತ್ತು. ಸಚಿವ ನಾಗೇಂದ್ರ ಆಪ್ತ ಸೇರಿ ಇಬ್ಬರನ್ನು ಬಂಧಿಸಿದ್ದಾರೆ ನಿಗಮದ ಒಟ್ಟು ₹187 ಕೋಟಿ ಹಣ ಅಕ್ರಮ ವರ್ಗಾವಣೆಗೆ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಗಮನಕ್ಕೆ ಬಾರದೇ ಅವ್ಯವಹಾರ ನಡೆಯಲು ಅಸಾಧ್ಯ. ತೆಲಂಗಾಣ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿದ್ದ ಸಚಿವ ಎನ್ ಎಸ್ ಬೋಸರಾಜು ಅವರು ಈ ಅಕ್ರಮದ ಹಿಂದೆ ಇದ್ದಾರೆ. ಕೂಡಲೇ ಇಬ್ಬರ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಇಬ್ಬರನ್ನು ಪಕ್ಷದಿಂದ ವಜಾಗೊಳಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಗುವುದು ನಿರ್ಲಕ್ಷ್ಯ ವಹಿಸಿದ್ದಲ್ಲಿ ಮೈತ್ರಿ ಪಕ್ಷದಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಎಚ್ಚರಿಸಿದರು.

ಅಕ್ರಮ ವರ್ಗಾವಣೆ ಪ್ರಕರಣದಿಂದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು ಸಾಲದು, ಅವರ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಬಸನಗೌಡ ದದ್ದಲ್ ಇದರಲ್ಲಿ ಶಾಮೀಲಾಗಿದ್ದು ಸಮುದಾಯಕ್ಕೆ ದ್ರೋಹ ಮಾಡಿದ್ದಾರೆ. ಅವರ ವಿರುದ್ಧ ಸಮುದಾಯದ ಮುಖಂಡರು ಹೊರಾಟ ಮಾಡಬೇಕು ಇದಕ್ಕೆ ಜೆಡಿಎಸ್ ಬೆಂಬಲ ನೀಡಲಿದೆ ಎಂದರು.

Latest Indian news

Popular Stories