ಇಂದು ಮಧ್ಯಾಹ್ನ ೧೨ ರಿಂದ ಜಿಲ್ಲೆ ಸಂಪೂರ್ಣ ಲಾಕ್‌ಡೌನ್ : Raichur Lockdown

Raichur Lockdown.ಮೇ.೧೮ (ಕ.ವಾ):- ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿರುತ್ತಾರೆ.
ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-೧೯ ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ೨೦೨೧ರ ಮೇ. ೧೯ರ ಮಧ್ಯಾಹ್ನ ೧೨ ರಿಂದ ಮೇ. ೨೨ರ ರಾತ್ರಿ ೧೨ ಗಂಟೆವರೆಗೆ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಮೇ. ೧೯ ರಂದು ಬೆಳಿಗ್ಗೆ ೬ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ಅಗತ್ಯ ವಸ್ತುಗಳಾದ ನೀರು, ಹಾಲು, ಹಣ್ಣು, ಕಿರಾಣ ಅಂಗಡಿ, ತರಕಾರಿ, ಮಾಂಸ ಮಾರಾಟ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ ಹಾಗೂ ಕೋವಿಡ್-೧೯ ಸೋಂಕು ಹರಡುವುದನ್ನು ತಡೆಗಟ್ಟುವಲ್ಲಿ ಜಿಲ್ಲೆಯ ನಾಗರೀಕರು ಸಹಕರಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನೀಡಲಾದ ವಿನಾಯಿತಿಗಳು ಇಂತಿವೆ.
(ಕAಟೈನ್ ಮೆಂಟ್ ವಲಯದ ಹೊರಗೆ) :-

೧. ೨೦೨೧ರ ಮೇ.೧೯ರ ಬೆಳಿಗ್ಗೆ ೬ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ಅಗತ್ಯ ವಸ್ತುಗಳಾದ ನೀರು, ಹಾಲು, ಹಣ್ಣು, ಕಿರಾಣ ಅಂಗಡಿ, ತರಕಾರಿ, ಮಾಂಸ ಮಾರಾಟ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

೨. ೨೦೨೧ರ ಮೇ.೧೯ರ ಮದ್ಯಾಹ್ನ ೧೨ ಗಂಟೆಯಿAದ ಮೇ. ೨೨ರ ರಾತ್ರಿ ೧೨ ಗಂಟೆವರೆಗೆ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ. ಇವುಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

೩. ಆಸ್ಪತ್ರೆಗಳಿಗೆ ಹೋಗುವವರು ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್ ಗಳಲ್ಲಿ ತೋರಿಸತಕ್ಕದ್ದು.
೪. ದಿನಪ್ರತಿಕೆ, ಎಟಿಎಂ ಸೇವೆಗಳು ಅನುಮತಿಸಲಾಗಿದೆ.
೫. ಆಹಾರ ಸಂಸ್ಕರಣೆಯ ಸೇವೆಗಳಾದ ಕೋಲ್ಡ್ ಸ್ಟೋರೇಜ್ ಗಳು, ಔಷಧ ಉದ್ಯಮಗಳು, ರಾಸಾಯನಿಕ ಉದ್ಯಮಗಳು, ವಿದ್ಯುತ್ ಉತ್ಪಾದನೆ ಮತ್ತು ಪ್ರಸರಣ ಘಟಕಗಳು, ಆರ್‌ಟಿಪಿಎಸ್ ಮತ್ತು ವೈಟಿಪಿಎಸ್‌ಗಳಲ್ಲಿ ಶೇ.೫೦%ರಷ್ಟು ಸಿಬ್ಬಂದಿಯೊAದಿಗೆ ನಿರ್ವಹಿಸಲು ಅನುಮತಿಸಲಾಗಿದೆ.
೬. ಎಲ್ಲಾ ರೀತಿಯ ಸರಕುಗಳ ಸಾಗಾಣ ಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ.
೭. ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಕಾರಾಗೃಹ ಸೇವೆಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ.
೮. ಕೋವಿಡ್-೧೯ಗೆ ಸಂಬAಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಚೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು.
೯. ನ್ಯಾಯಾಲಯಗಳು ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬAಧಿಸಿದ ಕಚೇರಿಗಳು ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಬೇಕು.
೧೦. ಸರ್ಕಾರೇತರ ಸಂಸ್ಥೆಗಳ ಕಛೇರಿಗಳು ಹಾಗೂ ಸ್ವಯಂ ಸೇವಕರು, ಇತರೆ ಎಲ್ಲಾ ಕಛೇರಿಗಳು ತಮ್ಮ ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ನಿರ್ವಹಿಸತಕ್ಕದ್ದು ಹಾಗೂ ಕ್ರ.ಸಂ.೬ ರಲ್ಲಿ ತಿಳಿಸಿದ ಸೇವೆಗಳಿಗೆ ಸಂಬAಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ, ಉಳಿದ ಸರಕಾರಿ/ ಅರೆ ಸರಕಾರಿ ಮತ್ತು ಖಾಸಗಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸುವುದು.
೧೧. ಮರಣ, ಅಂತ್ಯಕ್ರಿಯೆ, ಶವಸಂಸ್ಕಾರಕ್ಕೆ ೫ ಜನರಿಗೆ ಮಾತ್ರ ಅನುಮತಿಸಲಾಗಿದೆ.
೧೨. ಸರಕಾರಿ ಸಾರಿಗೆ ಸೇವೆಯನ್ನು ನಿರ್ಬಂಧಿಸಲಾಗಿದೆ. ಹಾಗೂ ಖಾಸಗಿ ಸಾರಿಗೆ ಸೇವೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿದ್ದು ವೈದ್ಯಕೀಯ ದಾಖಲೆಗಳನ್ನು ಚೆಕ್ ಪ್ಟೋಸ್ ಗಳಲ್ಲಿ ತೋರಿಸತಕ್ಕದ್ದು. ಇತರೇ ಎಲ್ಲಾ ಖಾಸಗಿ ಸಾರಿಗೆಯನ್ನು ನಿರ್ಬಂಧಿಸಲಾಗಿದೆ.
೧೩. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು / ಸಿಬ್ಬಂದಿಗಳ ಕರ್ತವ್ಯ ನಿಮಿತ್ಯ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ.
೧೪. ಮದುವೆಗಳಿಗೆ ಸಂಬAಧಪಟ್ಟ ತಹಶೀಲ್ದಾರಗಳ ಅನುಮತಿಯೊಂದಿಗೆ ೧೦ ಜನರಿಗೆ ಮಾತ್ರ ಮನೆಯ ಒಳಗಡೆ ನಡೆಸತಕ್ಕದ್ದು.
೧೫. ಆಸ್ಪತ್ರೆಗಳು ಒಳ ಹಾಗೂ ಹೊರ ರೋಗಿಗಳಿಗೆ ಉಪಹಾರ/ ಊಟದ ವ್ಯವಸ್ಥೆಯನ್ನು ಕಲ್ಪಿಸುವುದು ಸಂಬAಧಪಟ್ಟ ಆಸ್ಪತ್ರೆಗಳ ಜವಾಬ್ದಾರಿಯಾಗಿರುತ್ತದೆ.
೧೬. ಆಸ್ಪತ್ರೆಗಳಲ್ಲಿರುವ ಒಳ ಹಾಗೂ ಹೊರ ರೋಗಿಗಳಿಗೆ ಉಪಹಾರ/ ಊಟದ ವ್ಯವಸ್ಥೆ ಮತ್ತು ಜ್ಯೂಸನ್ನು ಸರಬರಾಜು ಮಾಡಲು ಆಸ್ಪತ್ರೆಗಳ ಮುಂದಿರುವ ಒಂದು ಹೋಟೆಲ್ ಹಾಗೂ ಒಂದು ಹಣ ್ಣನ ಅಂಗಡಿಗೆ ಮಾತ್ರ ಅನುಮತಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories