ಬೀಜ, ರಸಗೊಬ್ಬರ ಸಮರ್ಪಕವಾಗಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಸಲಹೆ


ರಾಯಚೂರು: ಮುಂಗಾರು ಹಂಗಾಮಿಗೆ ಬೇಕಾಗುವ ಬೀಜ, ರಸಗೊಬ್ಬರದ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಸಲಹೆ ನೀಡಿದರು.


ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಬರ ಹಾಗೂ ಮುಂಗಾರು ಸಿದ್ಧತಾ ಸಭೆಯಲ್ಲಿ ಮಾತನಾಡಿದರು.


ಜೂನ್ ಮೊದಲನೇ ವಾರದಲ್ಲಿ ಮುಂಗಾರು ಪ್ರವೇಶಿಸಲಿದ್ದು, ಕೃಷಿ ಇಲಾಖೆ ಅಗತ್ಯ ಬೀಜ, ಗೊಬ್ಬರ ದಾಸ್ತಾನು ಮಾಡಿಕೊಂಡು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಂಗಾರು ಹಂಗಾಮಿಗೆ ಬೇಕಾಗುವ ಬೀಜ, ರಸಗೊಬ್ಬರದ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡುವ ವ್ಯವಸ್ಥೆ ಮಾಡಬೇಕು. ಕಳಪೆ ಬೀಜ ಮಾರಾಟದ ಬಗ್ಗೆ ದೂರುಗಳು ಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಜಿಲ್ಲಾಧಿಕಾರಿ ಡಾ.ಚಂದ್ರಶೇಖರ ನಾಯಕ ಮಾತನಾಡಿ ಬರ ನಿರ್ವಹಣೆಯ ಕುರಿತು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರು ಪಾಂಡ್ಡೆ, ಎಡಿಸಿ ಅಶೋಕ ದುಡಗುಂಟಿ, ತಹಸೀಲ್ದಾರ ಸುರೇಶ ವರ್ಮ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Latest Indian news

Popular Stories