ಬಸನಗೌಡ ದದ್ದಲ್‌ ನಿವಾಸದ ಮೇಲೆ ಇಡಿ ದಾಳಿ

ರಾಯಚೂರು ಜುಲೈ 10: ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದ ಮೇಲೆ ಬೆಳಿಗ್ಗೆ 7 ಗಂಟೆಗೆ ದಾಳಿ ಮಾಡಿದ್ದು, ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಮಂಗಳವಾರ ಎಸ್ ಐಟಿ ಅಧಿಕಾರಿಗಳು ದದ್ದಲ್‌ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇವತ್ತು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಇದೇ ಅವಧಿಯಲ್ಲೇ 18 ದಾಳಿ ನಡೆಸಿರುವ ಮಾಹಿತಿ ಇದೆ.

ಜೊತೆಗೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories