ಪ್ರೇಯಸಿಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ : ಮನನೊಂದ ಯುವಕ ನೇಣಿಗೆ ಶರಣು

ರಾಯಚೂರು : ಅವರಿಬ್ಬರದು 5 ವರ್ಷದ ಪ್ರೀತಿ. ಆದರೆ ಯುವತಿಯು ಪ್ರೀತಿಸಿದ ಯುವಕನಿಗೆ ಕೈಕೊಟ್ಟು, ಮನೆಯವರು ನೋಡಿದ ಹುಡುಗನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಹೌದು ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದ್ದಕ್ಕೆ ವರುಣ್ ತೀವ್ರ ಬೇಸರಗೊಂಡಿದ್ದ. 5 ವರ್ಷದಿಂದ ಪ್ರೀತಿಸುತ್ತಿದ್ದವಳು ಕೈಕೊಟ್ಟಿದ್ದಕ್ಕೆ ಮನನೊಂದು ಇದೀಗ ವರುಣ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನಂತರ ವರುಣ್ ನೇಣಿಗೆ ಶರಣಾಗಿದ್ದಾನೆ. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories