ಪಡಿತರ ಅಕ್ಕಿ ಸರಬರಾಜಿನಲ್ಲಿ ಅಕ್ರಮ; ಶಿವಕುಮಾರ ಯಾದವ್ ಆರೋಪ


ರಾಯಚೂರು: ಅನ್ನಭಾಗ್ಯ ಯೋಜನೆಯ 10 ಸಾವಿರ ಕ್ವಿಂಟಲ್‌ ಪಡಿತ ಅಕ್ಕಿಯ ದುರ್ಬಳಕೆ ನಡೆದಿದ್ದು ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಶಿವಕುಮಾರ ಯಾದವ್ ಒತ್ತಾಯಿಸಿದರು.

ಅವರಿಂದು ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಆಹಾರ ಇಲಾಖೆಯಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಅಕ್ರಮ ಎಸಗಿದ್ದಾರೆ. ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಎಸಗಿದ್ದಾರೆ. ಬಿ.ಆರ್‌.ವೆಂಕಣ್ಣ, ಆನಂದ ಮೋಹನ, ಬಸವರಾಜ ಸೇರಿದಂತೆ ಅಧಿಕಾರಿಗಳು ಹೆಚ್ಚುವರಿ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಗಳಿಗೆ ರವಾನಿಸಿದ್ದಾರೆ. ಅಕ್ರಮದ ಬಗ್ಗೆ ಲೋಕಾಯುಕ್ತರ ತನಿಖೆಯಲ್ಲಿ ಸಾಬೀತಾದರೂ ಪ್ರಭಾವಿಗಳ ಹಸ್ತಕ್ಷೇಪದಿಂದ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.

ಸುಮಾರು ₹4 ಕೋಟಿ ಮೌಲ್ಯದ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕೇಸರ್ ದಾಖಲಿಸಿ ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಿ ಅವರಿಂದ ನಷ್ಟ ಭರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಂ.ಮಾರೆಪ್ಪ, ವೈ.ಎಸ್ ನರೇಶ ಕುಮಾರ ಉಪಸ್ಥಿತರಿದ್ದರು.

Latest Indian news

Popular Stories