ರಾಯಚೂರು : ಶಾಲೆಯ ಅತಿಥಿ ಶಿಕ್ಷಕಿಗೆ ಅಶ್ಲೀಲ ಸಂದೇಶ ಕಳಿಸಿದ ರಾಯಚೂರಿನ ಯರಮರಸ್‌ನ ಸರ್ಕಾರಿ ಆದರ್ಶ ವಿದ್ಯಾಲಯ ಪ್ರೌಢ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ ಆದೇಶ ಹೊರಡಿಸಿದ್ದಾರೆ.
ಶಾಲೆಯ ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷ ಮೆಹಬೂಬ್ ಅಲಿ ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಹ ಶಿಕ್ಷಕನಿಂದ ಕಿರುಕುಳಕ್ಕೆ ಒಳಗಾದ ಶಿಕ್ಷಕಿ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ ಅವರು ಮೆಹಬೂಬ ಅಲಿಯನ್ನು ಅಮಾನತು ಮಾಡಿದ್ದಾರೆ.