ಕೋಳಿ ಸಾಕಾಣ ಕೆ: ಅರ್ಜಿ ಆಹ್ವಾನ

ರಾಯಚೂರು, ಜು.೦೧, (ಕ.ವಾ):- ೨೦೧೯-೨೦ನೇ ಸಾಲಿನಲ್ಲಿ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಕೋಳಿ ಸಾಕಾಣ ಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಪರಿಶಿಷ್ಟ ವರ್ಗದವರು ನಿಗದಿತ ನಮೂನೆಯ ಅರ್ಜಿಯನ್ನು ಸಂಬAಧ ಪಟ್ಟ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ೨೦೨೧ರ ಜುಲೈ ೨೦ರಂದು ಕೊನೆಯ ದಿನ.
ಷರತ್ತುಗಳು ಇಂತಿವೆ: ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಜಮೀನು ಹೊಂದಿರುವ ಪರಿಶಿಷ್ಟ ಪಂಗಡದ ಕೃಷಿಕರಿಗೆ ಮೊದಲ ಆದ್ಯತೆ ನೀಡಲಾಗುವುದು, ಪಶುಸಂಗೋಪನೆ ಇಲಾಖೆ, ಕೃಷಿ ಇಲಾಖೆ ಮತ್ತು ಇತರೆ ಯಾವುದೇ ಇಲಾಖೆಯಿಂದ ಅನುದಾನ ಪಡೆದಿರಬಾರದು, ಕೋಳಿ ಸಾಗಾಣ ಕೆಯ ಶೆಡ್ ನಿರ್ಮಾಣಕ್ಕೆ ಅಗತ್ಯವಾದ ನಿವೇಶನ ಹಾಗೂ ನೀರಿನ ಸೌಲಭ್ಯ ಹೊಂದಿರಬೇಕು, ಸ್ಥಳೀಯ ಗ್ರಾಮ ಪಂಚಾಯತಿಯಿAದ ನಿರಾಪೇಕ್ಷಣಾ ಪತ್ರ ಪಡೆದಿರಬೇಕು, ವಿದ್ಯುತ್ ಸಂಪರ್ಕ ಹೊಂದಿರಬೇಕು, ಆರೋಗ್ಯ ಹಾಗು ಪಶುಸಂಗೋಪನೆ ಇಲಾಖೆಯ ಅನುಮತಿ ನಡೆದಿರಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories