ರಾಯಚೂರು :ಕ್ಷುಲ್ಲಕ ಕಾರಣಕ್ಕೆ ಜಗಳ,ಮನನೊಂದು ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ರಾಯಚೂರು : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ, ಇದರಿಂದ ಓರ್ವ ಮಹಿಳೆ ಮನನೊಂದು ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ನಡೆದಿದೆ.

ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ನಿವಾಸಿ ದೇವಮ್ಮ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗುತ್ತಿದೆ.ಹೊನ್ನಟಗಿ ಗ್ರಾಮದ ಬಸನಗವಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ದೇವಮ್ಮ ಹಾಗೂ ಆರೋಪಿ ದುರುಗಮ್ಮ ಅವರ ನಡುವೆ ವಿನಾಕಾರಣಕ್ಕೆ ಜಗಳ ಶುರುವಾಗಿದ್ದು, ಇದರಿಂದ ಮನನೊಂದ ದೇವಮ್ಮ ಜಮೀನಿನಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾವಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಗೆ ಸಾಗಿಸಿದರು. ಘಟನೆಗೆ ಸಂಬಂಧಿಸಿದಂತೆ ಮೃತ ದೇವಮ್ಮಳೊಂದಿಗೆ ಜಗಳವಾಡಿದ ಆರೋಪಿ ದುರುಗಮ್ಮ ಹಾಗೂ ಆಕೆಯ ಪತಿ ಸಿದ್ದಪ್ಪರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories