ಕೋವಿಡ್ ನಿಯಂತ್ರಣ ಕುರಿತು ಜಿಲ್ಲೆಯ ಶಾಸಕರು, ಅಧಿಕಾರಿಗಳೊಂದಿಗೆ ಸಭೆ ಜಿಲ್ಲೆಗೆ ಅಗತ್ಯವಿರುವ ಅಗತ್ಯ ಪ್ರಮಾಣದ ವ್ಯಾಕ್ಸಿನ್‌ಗಳ ಪೂರೈಕೆಗೆ ಕ್ರಮ-ಡಿಸಿಎಂ

ರಾಯಚೂರು,ಏ.೩೦(ಕ.ವಾ):- ಕೋವಿಡ್‌ಗೆ ಪ್ರತಿರೋಧವಾದ ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್‌ಗಳನ್ನು ಜಿಲ್ಲೆಗೆ ಅಗತ್ಯ ಪ್ರಮಾಣದಲ್ಲಿ ಪೂರೈಸಲು ಸರ್ಕಾರ ಮಟ್ಟದಲ್ಲಿ Z್ಪರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಲಕ್ಷö್ಮಣ ಸಂಗಪ್ಪ ಸವದಿ ತಿಳಿಸಿದರು.
ಅವರು ಏ.೩೦ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ತಹಶೀಲ್ದಾರರು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಕೋವಿಡ್-೧೯ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ೨ನೇ ಅಲೆ ಭಾಗವಾಗಿ ಸೋಂಕಿತರ ಸಂಖ್ಯೆ ತೀವ್ರ ಹೆಚ್ಚಳವಾಗುತ್ತಿದೆ, ಅದರಂತೆ ರಾಜ್ಯಾದ್ಯಂತ ಈ ಸೋಂಕು ತಡೆಗಟ್ಟಲು ಸರ್ಕಾರ ಜನತಾ ಕರ್ಫ್ಯೂ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ಸೋಂಕನ್ನು ಪರಿಣಾಮಕಾರಿಯಗಿ ತಡೆಗಟ್ಟಬೇಕಿದೆ, ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ, ರೆಮಿಡಿವಿರ್ ಚುಚ್ಚುಮದ್ದು ಹಾಗೂ ಗಂಭಿರ ಸ್ಥಿತಿಯ ರೋಗಿಗಳನ್ನು ಉಪಚರಿಸಲು ಅಗತ್ಯವಿರುವ ಆಕ್ಸಿಜನ್ ಸಿಲಿಂಡರ್‌ಗಳ ಪೂರೈಕೆಗೆ ಸರ್ಕಾರ ಮಟ್ಟದಲ್ಲಿ Z್ಪರ್ಚಿಸಿ, ಶೀಘ್ರವೇ ಜಿಲ್ಲೆಗೆ ಪೂರೈಸಲಾಗುವುದು ಎಂದು ಹೇಳಿದರು.
ಕಳೆದ ಬಾರಿ ಕೋವಿಡ್-೧೯ ಸೋಂಕು ನಿಯಂತ್ರಿಸಿದAತೆ ಈ ಬಾರಿಯು ಜಿಲ್ಲೆಯ ಎಲ್ಲಾ ಶಾಸಕರು, ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿ ಹಾಗೂ ಸಂಬAಧಿಸಿದ ಅಧಿಕಾರಿಗಳೊಂದಿಗೆ ಕೈಜೋಡಿಸಿ, ಬದ್ದತೆಯಿಂದ ಕೆಲಸ ಮಾಡಬೇಕಿದೆ, ಈ ಬಾರಿ ಲಾಕ್‌ಡೌನ್ ಬದಲಾಗಿ ಜನತಾ ಕರ್ಫ್ಯೂ ವಿಧಿಸಲಾಗಿದೆ, ಸಾರ್ವಜನಿP್ಪರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಬೆಳಗ್ಗೆ ೬ ರಿಂದ ೧೦ ವರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿ ಕೊಡಲಾಗಿದೆ. ಅದರೆಂತೆ ಕೃಷಿ ಹಾಗೂ ನಿರ್ಮಾಣ ಕಾಮಗಾರಿಗಳಿ ವಿನಾಯಿತಿ ನೀಡಲಾಗಿದೆ. ಮತ್ತು ಕೆಲವು ಅತ್ಯಗತ್ಯ ವಹಿವಾಟುಗಳಿಗೆ ವಿನಾಯಿತಿಯೂ ಇದೆ, ಇತರೆ ವಹಿವಾಟುಗಳು ಬಂದ್ ಆಗಿವೆ, ಪೊಲೀಸ್ ಇಲಾಖೆ ಕಳೆದ ಬಾರಿಯಂತೆ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳ್ಳಿಸಿರುವ ಮಾರ್ಗಸ್ರಚಿಗಳನ್ನು ಪರಿಣಾಮಕಾರಿಯವಾಗಿ ಅನುಷ್ಠಾನಗೊಳಿಸಬೇಕು, ಆರೋಗ್ಯ ಇಲಾಖೆ ಮತ್ತಷ್ಟು ಚುರುಕಾಗಬೇಕು, ಕೋವಿಡ್ ಫಲಿತಾಂಶದಲ್ಲಿ ಪಾಸಿಟಿವ್ ಬಂದ ರೋಗಿಗಳನ್ನು ಎ, ಬಿ ಹಾಗೂ ಸಿ ಎಂದು ವಿಂಗಡಿಸಿಕೊAಡು ತೀವ್ರ ಗಂಭೀರ ಸ್ಥಿತಿಯಲ್ಲಿರುವವರಿಗೆ ಕೋವಿಡ್ ಆಸ್ಪತ್ರೆಗೆ ದಾಖಲಿಸಿಕೊಂಡು ಉತ್ತಮ ಚಿಕಿತ್ಸೆ ನೀಡಿ ಗುಣಪಡಿಸಬೇಕು, ರೋಗ ಲಕ್ಷಣಗಳಿಲ್ಲದ ಎ-ಸಿಂಪ್ತಮೆಟಿಕ್ ರೋಗಿಗಳನ್ನು ಅವರ ಮನೆಗಳಲ್ಲಿಯೇ ಪ್ರತ್ಯೇಕವಾಗಿರಿಸಬೇಕು ಎಂದರು.
ಬೆಂಗಳೂರು, ತುಮಕೂರಿನ ನಂತರ ಸೋಂಕಿತರ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಮೂರನೇ ಸ್ಥಾನಕ್ಕೆ ಬರಬಾರದು, ಆ ದಿಸೆಯಲ್ಲಿ ಸೋಂಕಿತರ ಸಂಪರ್ಕವನ್ನು ಕಡಿತ ಮಾಡಬೇಕು, ಹಾಗಾಗಿ ಸರ್ಕಾರದ ಮಾರ್ಗಸೂಚನೆಗಳು ಗಂಭೀರವಾಗಿ ಪಾಲಿಸಬೇಕು, ಒಂದು ವೇಳೆ ಸಡಿಲ ಬಿಟ್ಟಲ್ಲೀ ಕಠಿಣ ಸಂದರ್ಭ ಎದುರಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದರು.
ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ, ಪೊಲೀಸ್ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಸಂಬAಧಿಸಿದ ಇಲಾಖೆಗಳು ಹೆಚ್ಚಿನ ಮುರ್ತುವರ್ಜಿ ವಹಿಸಬೇಕು, ರೆಮ್‌ಡಿಸಿವಿರ್ ಚುಚ್ಚುಮದ್ದು ಜಿಲ್ಲೆಗೆ ಸರಬರಾಜಾದಾಗ ತಾಲೂಕಗಳಿಗೆ ವಿತರಿಸಬೇಕು. ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅದರ ಬೇಡಿಕೆ ಬಗ್ಗೆ Z್ಪರ್ಚಿಸಿ ವಿತರಿಸಬೇಕು, ಅದೇ ರೀತಿ ರೆಮ್‌ಡಿಸಿವಿರ್ ಚುಚ್ಚುಮದ್ದು ನೀಡುವಾಗ ತಾಲೂಕು ಮಟ್ಟದಲ್ಲಿಯೂ ಮೇಲುಸ್ತವಾರಿ ಮಾಡಬೇಕು ಎಂದರು.
ಅಂಬ್ಯುಲೆನ್ಸ್ಗಳನ್ನು ಸದಾ ಸನ್ನದ ಸ್ಥಿತಿಯಲ್ಲಿಟ್ಟುಕೊಳ್ಳಬೇಕು, ಯಾವುದೇ ತಾಲೂಕಿನಲ್ಲೂ ಆ ಕೊರತೆಯಾಗಬಾರದು, ಒಂದು ವೇಳೆ ಕೊರತೆಯಾದಲ್ಲೀ, ಹಟ್ಟಿ ಚಿನ್ನದ ಗಣ ಕಂಪನಿಯಿAದ ಪಡೆದುಕೊಳ್ಳಬೇಕು. ಆಕ್ಸಿಜನ್ ಸಿಲಿಂಡರ್‌ಗಳು ಅಗತ್ಯ ಇದ್ದರೆ ಖರೀದಿಸಿಟ್ಟುಕೊಳ್ಳಬೇಕು, ರೆಮ್‌ಡಿಸಿವಿರ್ ಚುಚ್ಚುಮದ್ದಿನ ಹಂಚಿಕೆಯನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ Z್ಪರ್ಚಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಖಾಸಗಿ ಆಸ್ಪತ್ರಗೆ ಸಹಾಯಕ ಔಷಧ ನಿಯಂತ್ರಕರು, ಅಪರ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಅಗತ್ಯ ಪ್ರಮಾಣದ ಚುಚ್ಚುಮದ್ದನ್ನು ವಿತರಿಸಬೇಕು. ಈ ಹಂಚಿಕೆಯಲ್ಲಿ ತಾರತಮ್ಯವಾಗಬಾರದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ರೆಮ್‌ಡಿಸಿವಿರ್ ಚುಚ್ಚುಮದ್ದಿನ ಅಗತ್ಯತೆ ಕುರಿತು ಜಾಗೃತಿ ಮೂಡಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು, ಕಳೆದ ೬ ತಿಂಗಳ ಹಿಂದೆಯಷ್ಟೆ ಕೇಂದ್ರ ಸರ್ಕಾರದಿಂದ ತಾಲೂಕು ಆಸ್ಪತ್ರೆಗಳಿಗೆ ವೆಂಟಿಲ್ಭೆಟರ್‌ಗಳನ್ನು ಸರಬರಾಜು ಮಾಡಲಾಗಿದೆ, ಅವು ಕಾರ್ಯನಿರ್ವಹಿಸದಿದ್ದಲ್ಲೀ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಉಪ ಮುಖ್ಯಮಂತ್ರಿಗಳು, ಕೊರೋನಾ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾಗಿರುವ ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು, ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿಯೂ ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿರುವ ಬಗ್ಗೆ ಅಧಿಕಾರಿಗಳು ಗಸ್ತು ಮಾಡುವಂತೆ ಅವರು ಸೂಚಿಸಿದರು.
ದೇವದುರ್ಗ ಶಾಸಕ ಕೆ. ಶಿವನಗೌಡ ಮಾತನಾಡಿ, ಜಿಲ್ಲೆಗೆ ಅತಿ ಹೆಚ್ಚಿನ ಸಂಖ್ಯೆಯ ರೆಮ್‌ಡಿಸಿವಿರ್ ಚುಚ್ಚುಮದ್ದು ಸರಬರಾಜು ಮಾಡುವಂತೆ ಕೋರಿದರು.
ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಮಾತನಾಡಿ, ಕೋವಿಡ್ ಸೋಂಕಿತರೆಲ್ಲರಿಗೂ ರೆಮ್‌ಡಿಸಿವಿರ್ ಚುಚ್ಚುಮದ್ದು ನೀಡುವ ಅಗತ್ಯವಿಲ್ಲ ಎಂದರು.
ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ, ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಹಾಗೂ ರಾಯಚೂರು ಗ್ರಾಮಾಂತರ ಶಾಸಕ ದದ್ದಲ್ ಬಸವನಗೌಡ, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಅಪರ ಜಿಲ್ಲಾಧಿಕಾರಿ ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ, ಸಹಾಯಕ ಔಷಧ ನಿಯಂತ್ರಕ ವೆಂಕಟೇಶ, ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ನಾಗರಾಜ್ ಮಾತನಾಡಿದರು.
ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು ಸಭೆಯಲ್ಲಿದ್ದರು. ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯಾಧಿಕಾರಿಗಳು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

Latest Indian news

Popular Stories