ಸರಳವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ರಾಯಚೂರು

ರಾಯಚೂರು,ಏ.೧೪(ಕ.ವಾ):- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೦ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್.

ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಜಿಲ್ಲಾಡಳಿತದ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರ ನೇತೃತ್ವದಲ್ಲಿ ಪುಷ್ಪನಮನ ಅರ್ಪಿಸಿ, ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಮಸ್ಕಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹಾಗೂ ಕೋರಾನಾ ಸೋಂಕು ಹಿನ್ನಲೆಯಲ್ಲಿ ಈ ಬಾರಿ ಅತ್ಯಂತ ಸರಳವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.

ಏ.೧೪ರ ಬುಧವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ, ಅಪರ ಜಿಲ್ಲಾಧಿಕಾರಿ ಕೆ.ಎಚ್.

ದುರುಗೇಶ್, ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಡಾ.

ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ನಮಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಮುಖಂಡರು, ಜನಪ್ರತಿನಿಧಿಗಳು, ಅಭಿಮಾನಿಗಳು ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದರು.

ವಿವಿಧ ರಾಜಕೀಯ ಪಕ್ಷಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಸೂಚನೆ

Latest Indian news

Popular Stories