ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ; ಸಿಬಿಐ ತನಿಖೆಗೆ ಒತ್ತಾಯ


ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹187 ಕೋಟಿ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಕಾರ್ಯದರ್ಶಿ ಎನ್.ರಘುವೀರ ನಾಯಕ ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪ್ರತಿ ಆರ್ಥಿಕ ವರ್ಷಕ್ಕೆ ಸುಮಾರು ₹600 ರಿಂದ ₹700 ಕೋಟಿ ಅನುದಾನ ಮೀಸಲಿಡಲಾಗುತ್ತಿದೆ. ಈ ಹಣದಲ್ಲಿ ಫಲಾನುಭವಿಗಳಿಗೆ ಯೋಜನೆಗಳು ಮುಟ್ಟಬೇಕು ಆದರೆ ಆಳುವ ಸರ್ಕಾರದ ಪ್ರತಿನಿಧಿಗಳು ಸಮುದಾಯದ ಹಣವನ್ನು ದುರುಪಯೋಗ ಮಾಡಿಕೊಂಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ 2008 ರಲ್ಲಿ ಈ ಪ್ರಾಧಿಕಾರ ರಚನೆಯಾಯಿತು ಅಲ್ಲಿಂದ ಇಲ್ಲಿಯವರೆಗೂ ನಿಗಮದಲ್ಲಿ ಒಂದಿಲ್ಲೊಂದು ಹಗರಣದ ಮೂಲಕ ಅಪಖ್ಯಾತಿಗೆ ಒಳಗಾಗಿದೆ. ಈ ಸರ್ಕಾರದ ಅವಧಿಯಲ್ಲಿ ಈ ಅವ್ಯವಹಾರ ಒಬ್ಬ ಅಧಿಕಾರಿಯ ಪ್ರಾಣ ಬಲಿ ಪಡೆದುಕೊಂಡಿದ್ದು ದುರದೃಷ್ಠಕರ ಸಂಗತಿ. ಇದನ್ನು ಮುಚ್ಚಿಹಾಕಲು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದು ಇದರ ಹಿಂದೆ ಭಾಗಿಯಾದ ಕಾಣದ ಕೈಗಳ ರಕ್ಷಣೆಗೆ ಸರ್ಕಾರವೇ ಮುಂದಾಗಿದೆ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಕರಣದ ಕುರಿತು ಸರ್ಕಾರದ ಅಧಿಕಾರಿಗಳು, ಸಚಿವರು, ನಿಗಮದ ಅಧ್ಯಕ್ಷರು ಸೇರಿದಂತೆ ಎಲ್ಲರನ್ನು ವಿಚಾರಣೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು. ಸರ್ಕಾರ ಎಸ್‌ಐಟಿ ಬದಲಾಗಿ ಸಿಬಿಐ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮುಖಂಡರಾದ ಮಲ್ಲಿಕಾರ್ಜುನ ನಾಯಕ, ರಾಮಕೃಷ್ಣ ನಾಯಕ ಉಪಸ್ಥಿತರಿದ್ದರು.

Latest Indian news

Popular Stories