ಸಿಎಂ’ ಸೀಟ್ ಖಾಲಿ ಆದ ಮೇಲೆ ಹೈಕಮಾಂಡ್, ಶಾಸಕರು ಅದರ ಬಗ್ಗೆ ತೀರ್ಮಾನಿಸುತ್ತಾರೆ : ಸಚಿವ ಕೆ.ವೆಂಕಟೇಶ್

ರಾಮನಗರ : ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಕುರಿತು ಮಾತನಾಡುವವರ ಬಾಯಿ ಮುಚ್ಚಿಸಲು ಆಗಲ್ಲ. ಸಿಎಂ ಸೀಟ್ ಖಾಲಿ ಆದ ಮೇಲೆ ನಮ್ಮ ಹೈಕಮಾಂಡ್ ಹಾಗೂ ಶಾಸಕರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಇಂದು ಅವರು, ರಾಮನಗರದಲ್ಲಿ ರೇಷ್ಮೆ ಮಾರುಕಟ್ಟೆಯನ್ನು ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಜನ ೧೩೬ ಮಂದಿ ಶಾಸಕರನ್ನ ಗೆಲ್ಲಿಸಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ.ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಾರೆ.ಯಾವುದೇ ವ್ಯತ್ಯಾಸ ಆಗಿಲ್ಲ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರೇ ಇರ್ತಾರೆ ಎಂದರು.

Latest Indian news

Popular Stories