ರಾಮನಗರ: ರಾಜ್ಯದ ಜನರಿಗೆ ಮತ್ತೆ ಶಾಕ್ ಎನ್ನುವಂತೆ ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಬಿಗ್ ಶಾಕ್ ನೀಡಿದ್ದಾರೆ.
ನಂದಿನಿ ಹಾಲಿನ ದರ ಏರಿಕೆಯ ಕುರಿತು ಸುಳಿವು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ಹಾಲಿನ ಬೆಲೆ ಹೆಚ್ಚಳ ಮಾಡಿದ ಕೂಡಲೇ ಬಿಜೆಪಿಯವರು ನಮ್ಮ ವಿರುದ್ಧ ಗಲಾಟೆ ಮಾಡುತ್ತಾರೆ.
ಹೈನುಗಾರರು ಬದುಕುವುದು ಬೇಡವೇ? ರೈತರೇ, ಹಾಲಿನ ಉತ್ಪಾದನೆ ಎಷ್ಟು ಕಷ್ಟದ ಕೆಲಸ ಎಂಬುದನ್ನು ನೀವೇ ಈ ಬಿಜೆಪಿಯವರಿಗೆ ಹೇಳಿ ಎಂದಿದ್ದಾರೆ.