ರಾಮನಗರ: ನ್ಯಾಯಾಂಗ ನಿಂಧನೆ ಆರೋಪದಡಿ ವಕೀಲ, SDPI ಜಿಲ್ಲಾ ಉಪಾಧ್ಯಕ್ಷ ಚಾನ್ ಪಾಷನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.
ಜ್ಞಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ನ್ಯಾಯಾಧೀಶರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ವಕೀಲ ಚಾನ್ ಪಾಷನನ್ನು ಪೊಲೀಸರು ಬಂಧಿಸಿದ್ದಾರೆ.
ಫೆ. 3 ರಂದು ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಂಗ ನಿಂದನೆ ಫೋಸ್ಟ್ ಹಾಕಿದ ವಕೀಲನ ವಿರುದ್ಧ ರಾಮನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.