ಜ್ಯೂಸ್ ಬಾಟಲಿ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು

ಶಿಕಾರಿಪುರ: ತಾಲ್ಲೂಕಿನ ಹರಗುವಳ್ಳಿ ಗ್ರಾಮದಲ್ಲಿ ಬುಧವಾರ ಮನೆಯಲ್ಲಿ ಆಟವಾಡುವಾಗ ಒಂದೂವರೆ ವರ್ಷ ವಯಸಿನ ಮಗು ಜ್ಯೂಸ್ ಬಾಟಲಿ ಮುಚ್ಚಳ ನುಂಗಿ ಮೃತಪಟ್ಟಿದೆ.

ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಅವರ ಪುತ್ರ ನಂದೀಶ್ ಮೃತಪಟ್ಟ ಮಗು. ಬಾಟಲಿ ಮುಚ್ಚಳ ನುಂಗಿದಾಗ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Latest Indian news

Popular Stories