ರೈಲಿಗೆ ತಲೆ ಕೊಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಗೋಪಾಲಗೌಡ ನಗರದಲ್ಲಿ ಬುಧವಾರ ರಾತ್ರಿ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಪಾಲಗೌಡ ನಗರ ನಿವಾಸಿ, ಸಿರವಂತೆ ಸರ್ಕಾರಿ ಪಿಯು ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ(18) ಆತ್ಮಹತ್ಯೆ ಮಾಡಿಕೊಂಡವರು.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ಬುಧವಾರ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಭೂಮಿಕಾ ವಾಪಸ್ ಬಂದಿರಲಿಲ್ಲ. ಗುರುವಾರ ಬೆಳಗ್ಗೆ ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories