ಶಿವಮೊಗ್ಗ: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 3 ಮೃತ್ಯು ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ : ಇಂದು ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

ಗಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Latest Indian news

Popular Stories