ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಶಿವಮೊಗ್ಗ: ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ.

ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಯಾಗಿದ್ದು, ಬಳಿಕ ಬಂಧಿಸಲಾಗಿದೆ.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17 ವ) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಗಾನವಿ ರಜೆ ಊರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತವಾಗಿದೆ. ಹಿಂದಿನಿಂದ ಬಂದ ಕ್ಯಾಂಟರ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.

ಹಿಂಡ್ ಅಂಡ್ ರನ್ ಮಾಡಿದ ಕ್ಯಾಂಟರ್ ರನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories