ಶಿವಮೊಗ್ಗ ಮಹಾನಗರ ಪಾಲಿಕೆ’ ಆಯುಕ್ತರಾಗಿ ‘ಡಾ.ಕವಿತಾ ಯೋಗಪ್ಪನವರ್’ ನೇಮಕ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ಅನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ.

ಡಾ.ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಆಯುಕ್ತರು, ಶಿವಮೊಗ್ಗ ಮಹಾನಗರ ವಾಲಿಕೆ ಈ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ.

ಇನ್ನೂ ಈ ಆದೇಶದಿಂದ ಸ್ಥಳ ನಿರೀಕ್ಷೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

Latest Indian news

Popular Stories