ಶಿವಮೊಗ್ಗ : ಈದ್ ಮೆರವಣಿಗೆ ವೇಳೆ ಘರ್ಷಣೆ, ಕಿಡಿಗೇಡಿಗಳಿಂದ ಕಲ್ಲು ತೂರಾಟ,144 ಸೆಕ್ಷನ್ ಜಾರಿ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಾಂತಿನಗರದ ರಾಗಿಗುಡ್ಡದ ಬಳಿ ನಡೆದಿದೆ.

ಕಿಡಿಗೇಡಿಗಳು ಹತ್ತಿರದ ಮನೆಗಳ ಕಿಟಕಿಗಳು, ವಾಹನಗಳ ಮೇಲೆಲ್ಲ ಕಲ್ಲು ತೂರಾಟ ನಡೆಸಿದ್ದಾರೆ.ಅವರನ್ನು ತಡೆದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.ಮಾಧ್ಯಮದವರ ಮೇಲೂ ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.

ಈದ್ ಮಿಲಾದ್ ಸಂಬಂಧಿಸಿದಂತೆ ಹಾಕಿದ್ದ ಬ್ಯಾನರ್ ಬಿಳಿ ಬಣ್ಣ ಬಳಿದು ವಿವಾದ ಸೃಷ್ಟಿಯಾಗಿತ್ತು. ನಂತರ ಪ್ರತಿಭಟನೆ ಕೂಡ ನಡೆದಿತ್ತು. ಎಸ್ಪಿ ಮಾತುಕತೆ ನಡೆಸಿ ವಾತಾವರಣ ತಿಳಿಗೊಳಿಸಿದ್ದರು.

ಘರ್ಷಣೆ ಸಂಭವಿಸುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಕಿಡಿಗೇಡಿಗಳನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಆದರೆ ಕಿಡಿಗೇಡಿಗಳು ಪೊಲೀಸರು ಹಾಗೂ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇಬ್ಬರು ಪೊಲೀಸರು, ಮಾಧ್ಯಮದವರು ಗಾಯಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

Latest Indian news

Popular Stories