ನೇಹಾ ಕೊಲೆ’ ಪ್ರಕರಣ ‘CID’ ತನಿಖೆಗೆ: ತ್ವರಿತ ವಿಚಾರಣೆಗೆ ‘ವಿಶೇಷ ನ್ಯಾಯಾಲಯ’ ಸ್ಥಾಪನೆ: CM ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶಿವಮೊಗ್ಗ ವಿಮಾನನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು.

ದಿಂಗಾಲೇಶ್ವರ ಸ್ವಾಮಿಗಳ ಉಮೇದುವಾರಿಕೆ ಹಿಂಪಡೆದು ಕಾಂಗ್ರೆಸ್ ಬೆಂಬಲಿಸಲು ಮನವಿ
ಜಾತ್ಯಾತೀತ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ನ್ನು ಬೆಂಬಲಿಸಬೇಕೆಂದು ಅವರಲ್ಲಿ ಮನವಿ ಮಾಡಿದ್ದೇನೆ. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ ಎಂದರು.

Latest Indian news

Popular Stories