ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಹೊಸದಾಗಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಕೋವಿಡ್ ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಇಂದು 54 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಇವರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ
ಜಿಲ್ಲೆಯಲ್ಲಿ ಒಟ್ಟು 7 ಸಕ್ರೀಯ ಸೋಂಕಿತರಿದ್ದಾರೆ. ಇವರಲ್ಲಿ ಇಬ್ಬರನ್ನು ಕೋವಿಡ್ ಆಸ್ಪತ್ರೆಯಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ಐವರನ್ನು ಹೋಂ ಕ್ವಾರಂಟೈನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.
ಇಂದು ಪರೀಕ್ಷೆ ಮಾಡಿದಂತ 54 ಮಂದಿಯಲ್ಲಿ ಶಿವಮೊಗ್ಗದಲ್ಲಿ ಒಬ್ಬರಿಗೆ, ಇತರೆ ಜಿಲ್ಲೆಯ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ ಎಂಬುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ.