ಜ.12ರಂದು ಶಿವಮೊಗ್ಗದಲ್ಲಿ ‘ಯುವನಿಧಿ ಯೋಜನೆ’ ಉದ್ಘಾಟನೆ – ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಬರುವ ಜ. 12 ರಂದು ವಿವೇಕಾನಂದ ಜಯಂತಿಯಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ಕಾಂಗ್ರೆಸ್ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಈ ಕಾರ್ಯಕ್ರಮದ ವಿಚಾರವಾಗಿ ನಮ್ಮ ರಾಷ್ಟ್ರೀಯ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇವೆ.

ನಾವು ನುಡಿದಂತೆ ನಡೆದಿದ್ದೇವೆ. ನಮಗೆ ಅಧಿಕಾರ ಕೊಟ್ಟ ಜನರ ಋಣ ತೀರಿಸುವ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದರು.

Latest Indian news

Popular Stories