ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ: ಬಿಎಸ್​ ಯಡಿಯೂರಪ್ಪ

ಶಿವಮೊಗ್ಗ, ಮಾರ್ಚ್​​ 10: ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಹೇಳಿದರು.

ಇಂದು (ಮಾ.10) ಬೆಳ್ಳಂ ಬೆಳಿಗ್ಗೆ ಈಶ್ವರಪ್ಪ ಅಭಿಮಾನಿಗಳು ಮತ್ತು ಕುರುಬ ಸಮಾಜದ ಮುಖಂಡರು ಬಿಎಸ್​ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ, ಕಾಂತೇಶ್​ಗೆ ಟಿಕೆಟ್​ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಬಿಎಸ್​ ಯಡಿಯೂರಪ್ಪ ಶನಿವಾರ (ಮಾ.09) ರಂದು ಅವರ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕಳುಹಿಸಿದ್ದೆ. ದೆಹಲಿಯಲ್ಲಿ ಅಮಿತ್ ಶಾ (Amit Shah) ಅವರ ಜೊತೆ ಚರ್ಚಿಸಲು ನನ್ನ ಜೊತೆ ಈಶ್ವರಪ್ಪ ಬರಲಿ ಎಂದರು.

ನಾನು ಬೇರೆ ಅಲ್ಲ ಈಶ್ವರಪ್ಪ ಬೇರೆ ಅಲ್ಲ. ನಾನೇ ಖುದ್ದಾಗಿ ಅವರ ಜೊತೆಗೆ ನಿಲ್ಲುತ್ತೇನೆ. ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

Latest Indian news

Popular Stories