ಶಿವಮೊಗ್ಗ :ಮಲ್ಲಿಕಾರ್ಜುನ ಖರ್ಗೆಯಂತವ್ರ ಹೊಟ್ಟೆಯಲ್ಲಿ ಪ್ರಿಯಾಂಕ್ ಖರ್ಗೆಯಂತಹ ಕೆಟ್ಟ ಹುಳ ಹುಟ್ಟಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಹೇಳಿಕೆ ನೀಡಿ ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಲ್ಲಿಕಾರ್ಜುನ ಖರ್ಗೆಯಂತವರ ಹೊಟ್ಟೆಯಲ್ಲಿ ಪ್ರಿಯಾಂಕ್ ಖರ್ಗೆ ಅಂತಹ ಕೆಟ್ಟ ಹುಳ ಹುಟ್ಟಿದೆ, ಪ್ರಿಯಾಂಕ ಖರ್ಗೆ ಅಂತವರನ್ನ ಕಾಂಗ್ರೆಸ್ ನವರು ಒಪ್ಪಲ್ಲ.
ಕಾಂಗ್ರೆಸ್ ಹೆಸರಿನಲ್ಲಿ ಅಧಿಕಾರ ಹಂಚಿಕೊಂಡವರು ಇವರು.ಈಶ್ವರಪ್ಪ ವಾಗ್ದಾಳಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಸುರ್ಜೇವಾಲಾ ಅವರಿಗೆ 10 ಸಾವಿರ ದಂಡ ಕಟ್ಟಿ ಅಂತಾ ಕೋರ್ಟ್ ಹೇಳಿದೆ. ನಾನು ದಂಡ ಕಟ್ಟುವ ಪ್ರಸಂಗ ಬಂದಿಲ್ಲ. ನಾನು ಬೇಕಾದಷ್ಟು ಹೇಳಿಕೆ ಕೊಟ್ಟಿದ್ದೇನೆ. ಒಂದೇ ಒಂದು ರೂಪಾಯಿ ದಂಡ ಕಟ್ಟಿಲ್ಲ. ಡಿಕೆ ಶಿವಕುಮಾರ್ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ. ಇನ್ನೂ 100 ಎಫ್ ಐಆರ್ ಹಾಕಿ ನಾನು ಹೆದರುವುದಿಲ್ಲ. ನನ್ನ ಹೇಳಿಕೆ ವಿರುದ್ದ ಎಫ್ ಐಆರ್ ಹಾಕಿಸಿದ್ದೀರಾ ಎಂದು ಕೆ.ಎಸ್ ಈಶ್ವರಪ್ಪ ಮತ್ತೆ ಗುಡುಗಿದ್ದಾರೆ.