Shivamogga

ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ

ಶಿವಮೊಗ್ಗ: ಸೋಮವಾರ ಬೆಳಿಗ್ಗೆ ನದಿಗೆ ಇಳಿದು ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದಾರೆ. ಕಾಲು ಜಾರಿ ನದಿಗೆ ಬಿದ್ದರೋ ಅಥವಾ ತಾವೇ ನದಿಗೆ ಹಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಗ್ರಾಮದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಶವ ಪತ್ತೆಯಾಗಿದ್ದರು.

ಮೃತ ಶ್ರೀವತ್ಸ ಆಂಧ್ರಪ್ರದೇಶದ ವಿಶಾಖಪಟ್ಟಣ ಮೂಲದವರು ಎಂದು ತಿಳಿದುಬಂದಿದ್ದು, ಸಧ್ಯ ಅವರು ತೀರ್ಥಹಳ್ಳಿಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ.

ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಟ್ಟೆ ಬಿಟ್ಟು ಕಣ್ಮರೆಯಾಗಿದ್ದರು. ಮೊಬೈಲ್ ಆಧಾರದ ಮೇಲೆ ಬ್ಯಾಂಕ್ ಮ್ಯಾನೇಜರ್ ಎಂದು ಹೇಳಲಾಗಿತ್ತು. ನಿನ್ನೆ ತುಂಗಾ ನದಿಯಲ್ಲಿ ಅಗ್ನಿಶಾಮಕ ದಳ, ಪೊಲೀಸರು ಸಿಬ್ಬಂದಿ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಇದೀಗ ಅವರ ಶವ ಪತ್ತೆಯಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button