ಮಾ.17 ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ; ಸಾರ್ವಜನಿಕ ಸಮಾವೇಶದಲ್ಲಿ ಭಾಗಿ

ಶಿವಮೊಗ್ಗ : ಮಾ.17 ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಫ್ರೀಡಂ ಪಾರ್ಕ್ ನಲ್ಲಿ ಪ್ರಧಾನಿ ಮೋದಿ ಸಮಾವೇಶ ನಡೆಸಲಿದ್ದಾರೆ.

ಕೇರಳದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಮೋದಿ ಅವರು ಅಲ್ಲಿಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಸಾರ್ವಜನಿಕ ಬೃಹತ್ ಸಭೆಯಲ್ಲಿ ಭಾಗವಹಿಸಲಿದ್ದಾರೆ ಮಾ. 17 ರಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಲಿರುವ ಮೋದಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.

Latest Indian news

Popular Stories