ಶಿವಮೊಗ್ಗ : ಖಾಸಗಿ ಶಾಲೆಯ ಬಸ್ ಪಲ್ಟಿಯಾಗಿ 25 ಕ್ಕೂ ಹೆಚ್ಚು ಅಧಿಕ ಮಕ್ಕಳಿಗೆ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ನಡೆದಿದೆ.
ಭದ್ರಾವತಿಯ ಸ್ಪೂರ್ತಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಗಾಯಗೊಂಡ ಮಕ್ಕಳಿಗೆ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.