ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ : ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಇಂದು ಶಿವಮೊಗ್ಗ ಹಾಗೂ ರಾಯಚೂರಿಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 12 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ 2.30 ಕ್ಕೆ ರಾಯಚೂರಿಗೆ ತೆರಳಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

Latest Indian news

Popular Stories