ಶಿವಮೊಗ್ಗ: ಭೀಕರ ರಸ್ತೆ ಅಪಘಾತ,ಲಾರಿ ಹರಿದು ಮೂವರು ಯುವಕರು ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಯುವಕರು ಮೃತಪಟ್ಟಿದ್ದಾರೆ.

ಲಾರಿ ಹಾಗೂ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿದ್ದು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತಪಟ್ಟವರನ್ನು ವಿಕಾಸ್ (18), ಯಶ್ವಂತ‌(17) ಶಶಾಂಕ (17 ಎಂದು ಗುರುತಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories