ಶಿವಮೊಗ್ಗ: 3ನೇ ಮಹಡಿಯಿಂದ ಬಿದ್ದು ಪಿಯು ಕಾಲೇಜು ವಿದ್ಯಾರ್ಥಿನಿ ಸಾವು

ಶಿವಮೊಗ್ಗ:ಇಲ್ಲಿನ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಾಲೇಜಿನ ಮೂರನೇ ಮಹಡಿಯಿಂದ ಬಿದ್ದು ಸಾವಿಗೀಡಾಗಿದ್ದಾಳೆ ಎಂದು ವರದಿಯಾಗಿದೆ.

ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಬಾಲಕಿ ಕಾಲೇಜಿನ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದಳು. ಕಾಲೇಜಿನಲ್ಲಿ ಮಂಗಳವಾರ ಕಿರು ಪರೀಕ್ಷೆ ಬರೆದಿದ್ದ ಬಾಲಕಿ ವಾಶ್ ರೂಂಗೆ ತೆರಳುವುದಾಗಿ ಹೇಳಿ ಪರೀಕ್ಷಾ ಕೊಠಡಿಯಿಂದ ಹೊರಬಂದಿದ್ದಳು ಎಂದು ತಿಳಿದು ಬಂದಿದೆ.

‘ಮಗಳ ಸಾವು ಅನುಮಾನಾಸ್ಪದವಾಗಿದೆ.ಹೆಚ್ಚಿನ ಅಂಕಗಳಿಸುವಂತೆ ಕಾಲೇಜಿನಲ್ಲಿ ಶಿಕ್ಷಕರು, ಹಾಸ್ಟೆಲ್ ಸಿಬ್ಬಂದಿ ಒತ್ತಡ ಹೇರಿ, ಮಾನಸಿಕವಾಗಿ ಹಿಂಸೆ ನೀಡಿದ್ದರಿಂದ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ತನಿಖೆ ನಡೆಸುವಂತೆ’ ಪೋಷಕರು ಇಲ್ಲಿನ ದೊಡ್ಡಪೇಟೆ ಪೊಲೀಸರ ಠಾಣೆಗೆ ದೂರು ನೀಡಿದ್ದಾರೆ.

Latest Indian news

Popular Stories