ಬಿಜೆಪಿಯವರ ಮೇಲೆ ‘ಐಟಿ, ಇಡಿ ರೈಡ್’ ಆಗುವುದಿಲ್ಲ ಏಕೆ.?- ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರ ಮೇಲೆ, ವಿಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ. ಆದ್ರೇ ಬಿಜೆಪಿಯವರ ಮೇಲೆ ರೈಡ್ ಯಾಕೆ ಆಗ್ತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ.
ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ , ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ, ಅವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ. ಆದಾಯ ತೆರಿಗೆಯನ್ನು ಸರಿಯಾಗಿ ಕಟ್ಟದವರ ಮೇಲೆ ಕ್ರಮವಾಗಲಿ, ಆದರೆ ಒಬ್ಬರ ಮೇಲೆ ರೇಡ್ ಮಾಡಿ ಮತ್ತೊಬ್ಬರನ್ನು ಬಿಡುವ ಬದಲು, ಆದಾಯಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೆ ಕಾನೂನು ಕ್ರಮವಾಗಬೇಕು ಎಂದರು.

Latest Indian news

Popular Stories