ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆ: ಹಾವೇರಿ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಈಶ್ವರಪ್ಪ ಗರಂ

ಶಿವಮೊಗ್ಗ: ತಮ್ಮ ಮಗನಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ನಂತರ ಅಸಮಾಧಾನಗೊಂಡ ಅವರು, ಯಡಿಯೂರಪ್ಪ ಅವರು ತಮ್ಮ ಮಗ ಕೆ.ಇ.ಕಾಂತೇಶ್ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ‘ಹಾವೇರಿಯಿಂದ ಕೆ.ಇ.ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಅವರ ಮಾತಿನಂತೆ ನಮ್ಮ ಮಗ ಜನರ ವಿಶ್ವಾಸವನ್ನು ಗಳಿಸಲು ಪ್ರಯತ್ನಿಸುತ್ತಿದ್ದರು. ಆದರೆ, ಅಂತಿಮವಾಗಿ ನನ್ನ ಮಗನಿಗೆ ಟಿಕೆಟ್ ನಿರಾಕರಿಸಲಾಗಿದ್ದು ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆ.

Latest Indian news

Popular Stories