ಐಪಿಎಲ್ 2022: ರಾಜಸ್ಥಾನ ವಿರುದ್ಧ ಗುಜರಾತ್ ಗೆ 37 ರನ್ ಗಳ ಭರ್ಜರಿ ಜಯ, ಅಗ್ರಸ್ಥಾನಕ್ಕೇರಿದ ಟೈಟನ್ಸ್

ಮುಂಬೈ: ನಾಯಕ ಹಾರ್ದಿಕ್ ಪಾಂಡ್ಯ (ಅಜೇಯ 87) ಅಮೋಘ ಆಟದ ನೆರವಿನಿಂದ ಗುಜರಾತ್ ಟೈಟನ್ಸ್ ತಂಡವು ಗುರುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 37 ರನ್ ಅಂತರದ ಗೆಲುವು ದಾಖಲಿಸಿದೆ.

ಮುಂಬೈನ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟನ್ಸ್, ಪಾಂಡ್ಯ ನಾಯಕನ ಆಟದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು. ಬಳಿಕ ಗುರಿ ಬೆನ್ನತ್ತಿದ ರಾಜಸ್ಥಾನ್, ಜೋಸ್ ಬಟ್ಲರ್ (54) ಹೋರಾಟದ ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆ ಮೂಲಕ 37 ರನ್ ಗಳ ಹೀನಾಯ ಸೋಲು ಕಂಡಿತು.

ಈ ಮೂಲಕ ಐಪಿಎಲ್‌ಗೆ ಇದೇ ಮೊದಲ ಬಾರಿಗೆ ಪದಾರ್ಪಣೆ ಮಾಡಿರುವ ಗುಜರಾತ್ ಟೈಟನ್ಸ್ ತಂಡ ತಾನಾಡಿರುವ, ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವಿನೊಂದಿಗೆ ಒಟ್ಟು ಎಂಟು ಅಂಕಗಳನ್ನು ಸಂಪಾದಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇತ್ತ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಟೂರ್ನಿಯಲ್ಲಿ ಎರಡನೇ ಸೋಲು ಕಂಡಿದೆ.

ಅಜೇಯ 87 ರನ್ ಗಳಿಸಿದ ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Latest Indian news

Popular Stories