ಇಂದೋರ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಶುಭ್ ಮನ್ ಗಿಲ್ 2 ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ.
ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 212ರನ್ ಗಳ ಅಮೋಘ ಜೊತೆಯಾಟ ನೀಡಿತು. ಈ ಪೈಕಿ ಇಬ್ಬರೂ ಆರಂಭಿಕರು ಶತಕ ಸಿಡಿಸಿದ್ದು ವಿಶೇಷವಾಗಿತ್ತು. 85 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 9 ಬೌಂಡರಿಗಳ ಸಮೇತ ರೋಹಿತ್ ಶರ್ಮಾ 101ರನ್ ಗಳಿಸಿದರೆ, 78 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 13 ಬೌಂಡರಿಗಳ ನೆರವಿನಿಂದ ಗಿಲ್ 112 ರನ್ ಚಚ್ಚಿದರು.
ಈ ಮೂಲಕ ಏಕದಿನ ವೃತ್ತಿ ಜೀವನದ 4ನೇ ಶತಕವನ್ನು ಗಿಲ್ ಸಿಡಿಸಿದರು. ಅಂತೆಯೇ ಈ ಶತಕದ ಮೂಲಕ ಗಿಲ್ ಮತ್ತೊಂದು ಸಾಧನೆ ಮಾಡಿದ್ದು, 3 ಪಂದ್ಯಗಳ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಜಂಟಿ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನ ಬಾಬರ್ ಆಜಂ 360 ರನ್ ಸಿಡಿಸಿ 3 ಪಂದ್ಯಗಳ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು. ಇದೀಗ ಗಿಲ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲೂ ಅಷ್ಟೇ ರನ್ ಕಲೆಹಾಕಿ ಜಂಟಿ ಅಗ್ರ ಸ್ಥಾನಕ್ಕೇರಿದ್ದಾರೆ.
STAT: Most runs in a bilateral 3-match ODI series
360 Babar Azam vs WI 2016
360 Shubman Gill vs NZ 2023
349 Imrul Kayes vs Zim 2018
342 Quinton de Kock vs Ind 2013
330 Martin Guptill vs Eng 2013