ಏಷ್ಯಾ ಕಪ್: ಭಾರತ ತಂಡ ಪ್ರಕಟ

ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್‌ಗೆ (Asia Cup 2023) 17 ಸದಸ್ಯರ ಟೀಂ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ.

ದೆಹಲಿಯಲ್ಲಿ ಅಜಿತ್ ಅಗರ್ಕರ್ (Ajit Agarkar) ನೇತೃತ್ವದಲ್ಲಿ ನಡೆದ ​​ಸಭೆಯ ಬಳಿಕ ಈ ತಂಡವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೀಂ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾ (Rohit Sharma) ಅವರ ಕೈಯಲ್ಲಿದ್ದು, ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ (Hardik Pandya) ಮುಂದುವರೆಯಲ್ಲಿದ್ದಾರೆ. ನಿರೀಕ್ಷೆಯಂತೆ ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಏಷ್ಯಾಕಪ್ ಮೂಲಕ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಈ ಮೊದಲೇ ಊಹಿಸಿದಂತೆ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಏಕದಿನ ಏಷ್ಯಾಕಪ್ ತಂಡದಿಂದ ಕೈಬಿಡಲಾಗಿದೆ. ಆದರೆ ಅಚ್ಚರಿಯ ಆಯ್ಕೆ ಎಂಬಂತೆ ಕೇವಲ 8 ಟಿ20 ಪಂದ್ಯಗಳನ್ನಾಡಿರುವ ಹಾಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ ಅನುಭವ ಹೊಂದಿರದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಪಾಕಿಸ್ತಾನ ಹಾಗೂ ಶ್ರೀಲಂಕಾ ಜಂಟಿಯಾಗಿ ಆತಿಥ್ಯ ನೀಡುತ್ತಿರುವ ಈ ಏಕದಿನ ಏಷ್ಯಾಕಪ್​ಗೆ ಈಗಾಗಲೇ ಪ್ರಮುಖ ಸ್ಪರ್ಧಿಗಳಾದ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು 17 ಸದಸ್ಯರ ಬಲಿಷ್ಠ ತಂಡವನ್ನು ಈ ಪಂದ್ಯಾವಳಿಗೆ ಪ್ರಕಟಿಸಿದ್ದವು. ವಾಸ್ತವವಾಗಿ ವಿಶ್ವಕಪ್​ಗೆ ಭಿನ್ನವಾಗಿ ಏಷ್ಯಾಕಪ್​ನಲ್ಲಿ 15 ಸದಸ್ಯರ ಬದಲು 17 ಸದಸ್ಯರ ತಂಡವನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಹೀಗಾಗಿ ಪಾಕಿಸ್ತಾನ ಹಾಗೂ ಶ್ರೀಲಂಕಾ 17 ಸದಸ್ಯರ ತಂಡವನ್ನು ಪ್ರಕಟಿಸಿದ್ದವು. ಇದೀಗ ಬಿಸಿಸಿಐ ಕೂಡ ಈ ಏಷ್ಯನ್ ವಿಶ್ವಕಪ್​ಗೆ 17 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಬ್ಯಾಟಿಂಗ್ ವಿಭಾಗ- ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ತಿಲಕ್ ವರ್ಮಾ, ಇಶಾನ್ ಕಿಶನ್.

ಆಲ್​ರೌಂಡರ್ಸ್​- ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್.

ಬೌಲಿಂಗ್ ವಿಭಾಗ- ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

ರಾಹುಲ್- ಶ್ರೇಯಸ್ ಇನ್

ಈ ಮೊದಲು ಟೀಂ ಇಂಡಿಯಾ ಅಭಿಮಾನಿಗಳಿಗಿದ್ದ ಒಂದೇ ಒಂದು ಆತಂಕವೆಂದರೆ, ಈ ಟೂರ್ನಿಗೆ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಲಭ್ಯರಾಗುತ್ತಾರಾ ಎಂಬುದು. ಇದೀಗ ಅಭಿಮಾನಿಗಳ ಆತಂಕಕ್ಕೆ ತೆರೆ ಬಿದ್ದಿದ್ದು, ಇಂಜುರಿಯಿಂದ ಚೇತರಿಸಿಕೊಂಡಿರುವ ರಾಹುಲ್ ಹಾಗೂ ಅಯ್ಯರ್ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಈ ಇಬ್ಬರ ಆಗಮನದಿಂದ ತಂಡದಲ್ಲಿದ್ದ ನಾಲ್ಕನೇ ಕ್ರಮಾಂಕದ ಕೊರತೆ ಶ್ರೇಯಸ್ ಅಯ್ಯರ್ ರೂಪದಲ್ಲಿ ನೀಗಿದರೆ, ಕೆಎಲ್ ರಾಹುಲ್ ಆಗಮನದಿಂದ ಕೀಪಿಂಗ್ ಹಾಗೂ ಬ್ಯಾಟಿಂಗ್ ಮೂಲಕ ತಂಡದ ಬಲ ಮತ್ತಷ್ಟು ಹೆಚ್ಚಿದೆ.

Latest Indian news

Popular Stories