ಐಸಿಸಿ ವಿಶ್ವಕಪ್ 2023: ‘ಗೋಲ್ಡನ್ ಟಿಕೆಟ್’ ಪಡೆದ ಸೂಪರ್ ಸ್ಟಾರ್ ರಜನಿಕಾಂತ್!

ಮುಂಬೈ: ಮುಂದಿನ ತಿಂಗಳು ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ವಿಶೇಷ ಅತಿಥಿಯಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ಆಹ್ವಾನಿಸಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಚೆನ್ನೈನಲ್ಲಿರುವ ರಜನಿ ಅವರ ನಿವಾಸಕ್ಕೆ ತೆರಳಿ ಈ ಗೋಲ್ಡನ್ ಟಿಕೆಟ್ ನೀಡಿದ್ದಾರೆ. ಈಗಾಗಲೇ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೊಲ್ಕರ್ ಅವರಿಗೆ ಜಯ್ ಶಾ ಈ ಗೋಲ್ಡನ್ ಟಿಕೆಟ್ ನೀಡಿದ್ದಾರೆ. ಇಬ್ಬರ ಫೋಟೋವನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ದಿಗ್ಗಜ ನಟ ಭಾಷೆ ಮತ್ತು ಸಂಸ್ಕೃತಿಯನ್ನು ಮೀರಿ ಲಕ್ಷಾಂತರ ಜನರ ಹೃದಯದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ ಎಂದು ಅದು ಹೇಳಿದೆ.

ಅಕ್ಟೋಬರ್ 5 ರಂದು ಅಹಮದಾಬಾದ್ ನಲ್ಲಿ ವಿಶ್ವಕಪ್ ಪಂದ್ಯಾವಳಿ ಪ್ರಾರಂಭವಾಗಲಿದ್ದು,  ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್  ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಗೋಲ್ಡನ್ ಟಿಕೆಟ್‌ಗಳು ಬಿಸಿಸಿಐ ವಿಶ್ವಕಪ್ ಗಾಗಿ ಬಳಸುತ್ತಿರುವ ಪ್ರಚಾರ ತಂತ್ರವಾಗಿದೆ.  ಈ ಗೋಲ್ಡನ್ ಟಿಕೆಟ್ ಪಡೆದ ಸೆಲೆಬ್ರಿಟಿಗಳು ವಿಐಪಿ ಲಾಂಜ್ ನಲ್ಲಿ ಕುಳಿತು ಸಂಪೂರ್ಣವಾಗಿ ಉಚಿತವಾಗಿ ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸಬಹುದು. 

Latest Indian news

Popular Stories