ಕ್ಯಾಂಡಿಯ ಪಲ್ಲೆಕೆಲೆಯಲ್ಲಿ ಮಳೆಯಿಂದಾಗಿ ಗೌತಮ್ ಗಂಭೀರ್ ಕ್ರೀಡಾಂಗಣದೊಳಗೆ ನುಗ್ಗುತ್ತಿದ್ದಾಗ ಅಭಿಮಾನಿಗಳು ಕೊಹ್ಲಿ.. ಕೊಹ್ಲಿ.. ಎಂದು ಕೂಗಿದ ಘಟನೆ ನಡೆದಿದೆ.
ಇತ್ತೀಚಿಗೆ ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಳಪೆಯಾಗಿ ವಿಕೆಟ್ ಒಪ್ಪಿಸಿದ್ದರು. ಇದಕ್ಕಾಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ವಿರಾಟ್ ಕೊಹ್ಲಿಯ ಶಾಟ್ ಆಯ್ಕೆಯನ್ನು ಟೀಕಿಸಿದ್ದರು. ಇದು ವಿರಾಟ್ ಕೊಹ್ಲಿಯ ಅಭಿಮಾನಿಗಳನ್ನು ರೊಚ್ಚಿಗೇಳಿಸಿತ್ತು.
ಈ ವೇಳೆ ತಾಳ್ಮೆ ಕಳೆದುಕೊಂಡ ಲೋಕಸಭೆ ಸಂಸದರೂ ಆಗಿರುವ ಗೌತಮ್ ಗಂಭೀರ್ ಅವರು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ತಮ್ಮ ಮಧ್ಯದ ಬೆರಳನ್ನು ತೋರಿಸುವ ಮೂಲಕ ಟ್ರೋಲರ್‌ಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದರು. ವಿರಾಟ್ ಕೊಹ್ಲಿ ಅಭಿಮಾನಿಗಳು ಗೌತಮ್ ಗಂಭೀರ್ ಅವರನ್ನು ಟ್ರೋಲ್ ಮಾಡುತ್ತಿರುವುದು ಇದೇ ಮೊದಲೇನಲ್ಲ.
2023ರ ಐಪಿಎಲ್ ಸಂದರ್ಭದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ನಂತರ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ತೀವ್ರ ವಾಗ್ವಾದ ನಡೆಸಿದ್ದರು. ತಳ್ಳಾಟ-ನೀಕಾಟದವರೆಗೂ ಹೋಗಿತ್ತು.
ಇತ್ತೀಚೆಗೆ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಇದು ಕೇವಲ ಒಂದು ಘಟನೆಯಾಗಿ ಉಳಿಯದೆ, ಆಯಾ ಕ್ರಿಕೆಟ್ ನಾಯಕರನ್ನು ಆರಾಧಿಸುವ ಎರಡೂ ಕಡೆಯ ಅಭಿಮಾನಿಗಳನ್ನು ಪ್ರಚೋದಿಸಿತು.