Sports

ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಭಾರತ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 44 ರನ್ನುಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದೆ. ಈ ಗೆಲುವಿನಿಂದ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-೦ ಮುನ್ನಡೆ ಸಾಧಿಸಿತು.
ಭಾರತ ನೀಡಿದ 235 ರನ್ನುಗಳ ಬೃಹತ್ ಸವಾಲನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರುಗಳಲ್ಲಿ 9 ವಿಕೆಟ್ ನಷ್ಟಕ್ಕೆ 191 ರನ್ನುಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಭಾರತದ ಪರ ರವಿ ಬಿಷ್ಣೋಯ್ 39/3, ಪ್ರಸಿದ್ಧ್ ಕೃಷ್ಣ 41/3, ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಹಾಗೂ ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಆಸೀಸ್ ಪರ ಮಾರ್ಕಸ್ ಸ್ಟೊಯಿನಿಸ್ 45,ಮ್ಯಾಥ್ಯೂ ವೇಡ್ 42,ಟಿಮ್ ಡೇವಿಡ್ 37 ರನ್ ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರು.

ಕೇರಳದ ತಿರುವನಂತಪುರದ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ಭಾರತವನ್ನು ಬ್ಯಾಟಿಂಗ್‌ ಆಹ್ವಾನಿಸಿತು.

ಆರಂಭಿಕರಾದ ಯಶಸ್ವಿ ಜೈಸ್ವಾಲ್ (53),ರುತುರಾಜ್ ಗಾಯಕವಾಡ್‌ (52), ಇಶಾನ್ ಕಿಶನ್ (58) ಹಾಗೂ ರಿಂಕು ಸಿಂಗ್‌( 31) ಅವರ ಸ್ಫೋಟಕ ಆಟದ ನೆರವಿನಿಂದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235 ರನ್‌ಗಳ ಬೃಹತ್‌ ಮೊತ್ತ ಗಳಿಸಿತು.ಭಾರತದ ಪರ ಬ್ಯಾಟರುಗಳಿಂದ 13 ಸಿಕ್ಸ್ ಹಾಗೂ 19 ಬೌ೦ಡರಿಗಳು ಹರಿದುಬಂತು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button