ಮೂರನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ಸುಲಭ ಜಯ

ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಬಳಿಕ ಇದೀಗ ಗೆಲುವಿನ ಲಯಕ್ಕೆ ಮರಳಿರುವ ಟೀಂ ಇಂಡಿಯಾ ಹರಾರೆಯಲ್ಲಿ ಸತತ ಎರಡನೇ ಗೆಲುವನ್ನು ದಾಖಲಿಸಿದೆ.

ಎರಡನೇ ಟಿ20ಯಲ್ಲಿ 100 ರನ್‌ಗಳ ಜಯ ಸಾಧಿಸಿದ್ದ ಟೀಂ ಇಂಡಿಯಾ ಇದೀಗ ಮೂರನೇ ಟಿ20ಯಲ್ಲೂ ಜಿಂಬಾಬ್ವೆಯನ್ನು ಮಣಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 182 ರನ್ ಗಳಿಸಿತು, ಉತ್ತರವಾಗಿ ಜಿಂಬಾಬ್ವೆ ತಂಡ ಉತ್ತಮ ಹೋರಾಟ ನೀಡಿದರೂ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟಿ20 ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಟಿ20 ಸರಣಿಯ ಮುಂದಿನ ಪಂದ್ಯ ಶನಿವಾರ ನಡೆಯಲಿದೆ.

Latest Indian news

Popular Stories