ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಆರ್ ಅಶ್ವಿನ್

ನವದೆಹಲಿ: 38 ವರ್ಷದ ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಬುಧವಾರ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಆರ್ ಅಶ್ವಿನ್ ಅವರು 106 ಪಂದ್ಯಗಳಲ್ಲಿ 537 ವಿಕೆಟ್ ಗಳನ್ನು ಪಡೆದಿದ್ದಾರೆ.

ಆರ್ ಅಶ್ವಿನ್ ಅವರು ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿ 619 ವಿಕೆಟ್‌ಗಳನ್ನು ಪಡೆದ ಅನಿಲ್ ಕುಂಬ್ಳೆ ನಂತರ ಎರಡನೇ ಸ್ಥಾನದಲ್ಲಿದ್ದಾರೆ.

ಹಾಗೆಯೇ 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. ಇನ್ನು 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.

Latest Indian news

Popular Stories