ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೊದಲೆರೆಡು ಪಂದ್ಯಕ್ಕೆ ಕೆಎಲ್ ರಾಹುಲ್ ಸಾರಥ್ಯ ವಹಿಸಲಿದ್ದಾರೆ.
ಮೊದಲ ಪಂದ್ಯ ಸೆಪ್ಟೆಂಬರ್ 22ರಂದು ಮೊಹಾಲಿಯಲ್ಲಿ ನಡೆದರೆ ಎರಡನೇ ಪಂದ್ಯ ಸೆಪ್ಟೆಂಬರ್ 24ರಂದು ಇಂದೋರ್ ನಲ್ಲಿ ನಡೆಯಲಿದೆ. ಈ ಎರಡು ಪಂದ್ಯಗಳಿಗೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ.
ಮೊದಲೆರೆಡು ಪಂದ್ಯಕ್ಕೆ ಭಾರತ ತಂಡ:
ಕೆಎಲ್ ರಾಹುಲ್(ನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ(ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್(ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಮೂರನೇ ಪಂದ್ಯ ಸೆಪ್ಟೆಂಬರ್ 27ರಂದು ರಾಜ್ ಕೋಟ್ ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ.
ಮೂರನೇ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ,(ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.