ಇದು ನನ್ನ ಕೊನೆಯ ಚುನಾವಣೆ: ಮಾಜಿ ಸಚಿವ ನಾಡಗೌಡ

ವಿಜಯಪುರ: ಇದು ನನ್ನ ಕೊನೆಯ ಚುನಾವಣೆ ಆಗಿದೆ. ಅದಕ್ಕಾಗಿ ಜನತೆ ನನಗೆ ಆಶೀರ್ವಾದ ಮಾಡಬೇಕು ಎಂದು ಮಾಜಿ ಸಚಿವ ಸಿ ಎಸ್ ನಾಡಗೌಡ ಹೇಳಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜಿನೆಸ್ ಮಾಡಲು ಬಂದಿಲ್ಲ. ನನ್ನ ಮತಕ್ಷೇತ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ. ಇನ್ನೂ ಮುದ್ದೇಬಿಹಾಳ ಮತ ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಆಹಾರ ನಿಗಮದಲ್ಲಿ ಆಗಿರುವ ಅವ್ಯವಹಾರಗಳ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಶಾಸಕ ನಡಹಳ್ಳಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಮುದ್ದೇಬಿಹಾಳ ಪಟ್ಟಣಕ್ಕೆ ಫೆಬ್ರವರಿ 21ಕ್ಕೆ ಪ್ರಜಾಧ್ವನಿ ಬಸ್ ಯಾತ್ರೆ ಆಗಮಿಸಲಿದೆ. ಅದಕ್ಕಾಗಿ ಕಾರ್ಯಕರ್ತರು, ಜನತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Latest Indian news

Popular Stories