ಕರಾವಳಿಯಾದ್ಯಂತ ತೆರೆ ಕಾಣ ಬೇಕಿದ್ದ “ಪಿಲಿ” ಚಲನಚಿತ್ರಕ್ಕೆ ನ್ಯಾಯಾಲಯದಿಂದ ತಡೆ

ಉಡುಪಿ ಫೆ.9 : ಕರಾವಳಿಯಾದ್ಯಂತ ನಾಳೆ ತೆರೆಗೆ ಸಿದ್ದವಾಗಿರುವ “ಪಿಲಿ” ತುಳು ಚಿತ್ರ ಥಿಯೇಟರ್‍ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.

ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈ ಚಿತ್ರ ಪ್ರದರ್ಶನ ಕಾಣದಂತೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನಿರ್ಮಾಪಕ ಮಂದೀಪ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯವು ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಎಂಬಾತ ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ಪಡೆದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ ಎಂದು ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ. ಹಾಗೂ ಕೋರ್ಟ್ ನಲ್ಲಿ ಭರತ್ ಭಂಡಾರಿ ವಿರುದ್ಧ ಮತ್ತು ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ತಿಳಿಸಿದ್ದಾರೆ.

Latest Indian news

Popular Stories