ಬಳ್ಳಾರಿ: ಜೆಡಿಎಸ್ ಪಕ್ಷದ ಹಿರಿಯ ಮುಖಂಡ ನಾರಾ ಪ್ರತಾಪ್ ರೆಡ್ಡಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ನಗರದ ಖಾಸಗಿ ಹೊಟೇಲ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ಹಿರಿಯ ಮುಖಂಡ ಅಲ್ಲಂ ವೀರಭದ್ರಪ್ಪ, ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಜಿಲ್ಲಾಧ್ಯಕ್ಷ ಜಿ.ಎಸ್.ಮಹ್ಮದ್ ರಫೀಕ್ ಅವರು, ಪ್ರತಾಪ್ ರೆಡ್ಡಿ ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಬಳಿಕ ಮಾತನಾಡಿದ ಪ್ರತಾಪ ರೆಡ್ಡಿ ಅವರು, ಕಾಂಗ್ರೆಸ್ ಪಕ್ಷ ಜನರಲ್ಲಿದೆ. ಈಚೆಗೆ ಜೋಡೊ ಯಾತ್ರೆ ವೇಳೆ ಬಳ್ಳಾರಿಗೆ ಬಂದಿದ್ದ ರಾಹುಲ್ ಗಾಂಧಿ, ಇಲ್ಲಿನ ಜೀನ್ಸ್ ಘಟಕಗಳಿಗೆ ಭೇಟಿ ನೀಡಿ, ಅದನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡಿದ್ದಾರೆ. ಲಂಡನ್ ನಲ್ಲಿ ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿದ್ದಾರೆ. ಕಳೆದ ವಾರ ಬಳ್ಳಾರಿಗೆ ಬಂದಾಗ ಬಳ್ಳಾರಿಯನ್ನು ಜೀನ್ಸ್ ಕ್ಯಾಪಿಟಲ್ ಮಾಡುವುದಾಗಿ ಮತ್ತು ಅದಕ್ಕೆ 5 ಸಾವಿರ ಕೋಟಿ ರೂ. ಮೀಸಲಿಡುವುದಾಗಿ ತಿಳಿಸಿದ್ದಾರೆ. ಜತೆಗೆ ಬಳ್ಳಾರಿಯಲ್ಲಿ ಸಾಫ್ಟ್ವೇರ್ ಪಾರ್ಕ್ ಸ್ಥಾಪಿಸಬೇಕು ಎಂದರು. ಬಳ್ಳಾರಿಯಲ್ಲಿ ಜಿಂದಾಲ್ ಗಿಂತಲೂ ಅತಿಹೆಚ್ಚು ಜನರು ಜೀನ್ಸ್ ಕೆಲಸದಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಅಧಿಕಾರಿಗಳು, ಭರತ್ ರೆಡ್ಡಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದರು.